ಉಳ್ಳಾಲ: ಇಂದಿನಿಂದ ಹರೇಕಳ-ಅಡ್ಯಾರ್ ಸೇತುವೆಯಲ್ಲಿ ವಾಹನಗಳ ಸಂಚಾರ   

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.01. ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್-ಕಣ್ಣೂರಿಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆಯಲ್ಲಿ ಎ.1ರಿಂದ ದ್ವಿಚಕ್ರ ಮತ್ತು ತ್ರಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನಗಳ ಸಂಚಾರ ನಡೆಯಲಿದೆ ಎಂದು ತಿಳಿದು ಬಂದಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈ ಸೇತುವೆಯನ್ನು ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಸುವಂತಿಲ್ಲ. ಆದರೆ ಗ್ರಾಮಸ್ಥರು ಸೇತುವೆಯ ಬಳಕೆಗೆ ಅವಕಾಶ ಮಾಡಿಕೊಡುವಂತೆ ಸ್ಥಳೀಯ ಶಾಸಕ ಯು.ಟಿ. ಖಾದರ್ ಬಳಿ ಮನವಿ ಮಾಡಿಕೊಂಡ ಮೇರೆಗೆ ಅವರು ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Also Read  ಮಾವಿನ ಹಣ್ಣಿನಿಂದ ತಯಾರಿಸಬಹುದಾದ ಖಾದ್ಯಗಳು

 

error: Content is protected !!
Scroll to Top