ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ, ಏ.03. ಬೆಂಗಳೂರಿನ‌ ಮೂವರು ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಮೃತಪಟ್ಟ ದುರಂತ ಘಟನೆ ನಡೆದಿದೆ. ಇಮ್ರಾನ್ ಖಾನ್ (20), ರಾಧಿಕಾ(19) ಮತ್ತು ಪೂಜಾ(19)ಮೃತರು ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಕಾಲೇಜೊಂದರಲ್ಲಿ ಡಿ-ಫಾರ್ಮ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀನಿವಾಸ ಸಾಗರ ಜಲಾಶಯಕ್ಕೆ ತೆರಳಿದ್ದು ಮೂವರು ಈಜಲು ಹೋಗಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳ ನೆರವಿನೊಂದಿಗೆ ಶೋಧಕಾರ್ಯ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.

 

Scroll to Top