ಮಂಗಳೂರು: ಚುನಾವಣೆ ಹಿನ್ನೆಲೆ ➤ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಿಂದ ಮಹತ್ವದ ಸಲಹೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಏ.03. ಚುನಾವಣೆ ನೀತಿ‌ ಸಂಹಿತೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ರವಿಕುಮಾರ್ ಎಂ.ಆರ್ ಅವರು ಸುದ್ದಿಗೋಷ್ಟಿ ನಡೆಸಿ ಮಹತ್ವದ ಮಾಹಿತಿ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಡಿಸಿ, ಮಾಲ್‍ಗಳು, ಮದುವೆ ಮಂಟಪಗಳು, ಸಭಾ ಭವನಗಳು, ಚಲನಚಿತ್ರ ಮಂದಿರಗಳು ಇತ್ಯಾದಿಗಳ ಮಾಲೀಕರೊಂದಿಗೆ ರಾಜಕೀಯ ಪಕ್ಷಗಳ ಮುಖಂಡರು, ಅಭ್ಯರ್ಥಿಗಳ ಸಂಪರ್ಕ ಇದ್ದಲ್ಲಿ ಅವರು ಈ ವೇದಿಕೆಗಳನ್ನು ಬಳಸಿಕೊಂಡು ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಲು ಅವಕಾಶ ನೀಡಬಾರದು.ಒಂದು ವೇಳೆ ಉಲ್ಲಂಘನೆ ಕಂಡು ಬಂದಲ್ಲಿ ಆಯಾ ಪ್ರದೇಶದ ಚುನಾವಣಾ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಹೇಳಿದ್ದಾರೆ.

Also Read  ಬಿದ್ದು ಸಿಕ್ಕಿದ ಚಿನ್ನವನ್ನು ಮಾಲಕರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಪ್ರಭಾಕರ್

error: Content is protected !!
Scroll to Top