ಮಂಗಳೂರು: ಕರ್ಕಶ ಹಾರ್ನ್ ಬಳಕೆ ! ➤ ಮೂರು ದಿನಗಳಲ್ಲಿ 130 ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.04. ಕರ್ಕಶ ಹಾರ್ನ್ ಬಳಸುತ್ತಿದ್ದ ವಾಹನಗಳನ್ನು ತಡೆದ ಮಂಗಳೂರು ಸಂಚಾರಿ ಠಾಣಾ ಪೊಲೀಸರು ಮೂರು ದಿನಗಳಲ್ಲಿ ಒಟ್ಟು 130 ವಾಹನಗಳ ಹಾನ್೯ ತೆಗೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಠಾಣಾಧಿಕಾರಿ ರಮೇಶ್ ಹಾನಾಪುರ ನೇತೃತ್ವದ ಪೊಲೀಸರ ತಂಡ ತಲಪಾಡಿಯಲ್ಲಿ ತಪಾಸಣೆ ನಡೆಸಿ ಕ್ರಮಕೈಗೊಂಡಿದ್ದು, ಟ್ರಕ್ ಗಳಲ್ಲಿ ಕಾನೂನು ಉಲ್ಲಂಘಿಸಿ ಕರ್ಕಶವಾದ ಹಾನ್೯ ಬಳಕೆ ಮಾಡುತ್ತಿರುವ ಕುರಿತು ಸಾರ್ವಜನಿಕ ವಲಯದಿಂದ ದೂರುಗಳು ಬಂದ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ. ತಪಾಸಣೆ ನಡೆಸಿದ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ ಎನ್ನಲಾಗಿದೆ.

 

Scroll to Top