ಮಹಿಳೆಯ ಖಾಸಗಿ ಫೋಟೊ ತೆಗೆದ ಪ್ರಕರಣ ➤ ಆರೋಪಿಯ ವಿರುದ್ಧ ಎಫ್‌ಐಆರ್‌ ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಮಹಿಳೆಯೊಬ್ಬರ ಖಾಸಗಿ ಫೋಟೊಗಳನ್ನು ಕ್ಲಿಕ್ಕಿಸಿದ್ದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.


‘ಆಂಧ್ರಪ್ರದೇಶದ 40 ವರ್ಷ ವಯಸ್ಸಿನ ಮಹಿಳೆ ದೂರು ನೀಡಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.


ಶಾರ್ಟ್‌ ಧರಿಸಿದ್ದ ಅವರ ಫೋಟೊವನ್ನು ಆರೋಪಿ ತನ್ನ ಮೊಬೈಲ್‌ ನಲ್ಲಿ ಕ್ಲಿಕ್ಕಿಸಿದ್ದ. ಅದನ್ನು ನೋಡಿದ್ದ ಮಹಿಳೆ, ಆತನನ್ನು ಪ್ರಶ್ನಿಸಿದ್ದರು. ಇಬ್ಬರ ನಡುವೆ ವಾಗ್ವಾದ ನಡೆದಿತ್ತು.’

 

Scroll to Top