(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05 ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಏಪ್ರಿಲ್, ಮೇನಲ್ಲಿ ಆಚರಿಸಬೇಕಾದ ಜಯಂತಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಬಗ್ಗೆ ಉಲ್ಲೇಖಿಸಿಲ್ಲ.
ಹಾಗಾಗಿ ಸರ್ಕಾರದ ವಿರುದ್ಧ ಆರೋಪಗಳು ಕೇಳಿಬರುತ್ತಿವೆ.ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಜಯಂತಿಗಳ ಪಟ್ಟಿಯಲ್ಲಿ ಅಂಬೇಡ್ಕರ್ ಜಯಂತಿಯೇ ನಾಪತ್ತೆ ಆಗಿದೆ. ಈ ಹಿನ್ನೆಲೆ ಜಯಂತಿ ಕೈ ಬಿಟ್ಟಿರುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ.