ಮದುವೆ ಉಡುಗೊರೆಯಾಗಿ ನೀಡಿದ್ದ ಮ್ಯೂಸಿಕ್‌ ಸಿಸ್ಟಮ್‌ನಲ್ಲಿ ಬಾಂಬ್‌..! ➤ ನವ ವಿವಾಹಿತ ಸೇರಿ ಇಬ್ಬರು ಬಲಿ

(ನ್ಯೂಸ್ ಕಡಬ)newskadaba.com  ಛತ್ತೀಸ್ ಗಢ, ಏ.05. ಮದುವೆಗೆ ನಾನಾ ರೀತಿಯ ಉಡುಗೊರೆಗಳು ಬರೋದು ಸಾಮಾನ್ಯವಾಗಿದ್ದು, ಸಂತಸದ ಸಮಾರಂಭದಲ್ಲಿ ಸೂತಕದ ವಾತಾವರಣ ಏರ್ಪಟ್ಟಿದೆ. ಛತ್ತೀಸ್‌ಗಢದಲ್ಲಿ ದುರಂತ ಘಟನೆ ನಡೆದಿದೆ.

ಮದುವೆ ಉಡುಗೊರೆಯಾಗಿ ಪಡೆದ ಹೋಮ್ ಥಿಯೇಟರ್ ಮ್ಯೂಸಿಕ್ ಸಿಸ್ಟಮ್ ಮನೆಯಲ್ಲೇ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಮತ್ತು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Scroll to Top