ರೈಲಿನಲ್ಲಿ ಬೆಂಕಿ ಹಚ್ಚಿ ಮೂವರ ಹತ್ಯೆ ➤ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com  ಮುಂಬೈ, ಏ.05.  ಕೋಯಿಕ್ಕೋಡ್‌ ನಲ್ಲಿ ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರ ಸಾವಿಗೆ ಕಾರಣವಾಗಿದ್ದ ಪ್ರಮುಖ ಆರೋಪಿ ಶಾರುಖ್ ಸೈಫಿಯನ್ನು ಮಹಾರಾಷ್ಟ್ರ ಪೊಲೀಸ್ ಮತ್ತು ಕೇಂದ್ರ ಗುಪ್ತಚರ ದಳ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿವೆ.

ಈ ಭೀಕರ ಪ್ರಕರಣದಲ್ಲಿ ಮೂವರ ಸಾವು ಮಾತ್ರವಲ್ಲದೇ 9 ಜನರು ಗಾಯಗೊಂಡಿದ್ದರು. ಕೊಯಿಕ್ಕೋಡ್‌ ನಲ್ಲಿ ಅಳಪುಳಾ- ಕಣ್ಣೂರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿದ ಆರೋಪಿ ಅಲ್ಲಿಂದ ತಪ್ಪಿಸಿಕೊಂಡಿದ್ದ. ಈತನ ಪತ್ತೆಗೆ ವಿಶೇಷ ತನಿಖಾ ದಳ ತನ್ನ ಹುಡುಕಾಟವನ್ನು ತೀವ್ರಗೊಳಿಸಿತ್ತು.

Also Read  ಸಿಗದ ರಜೆ, ನೊಂದ ಕೆಎಸ್‌ಆರ್‌ಟಿಸಿ ಚಾಲಕ ಬಸ್‌ನಲ್ಲೇ ಆತ್ಮಹತ್ಯೆ

 

error: Content is protected !!
Scroll to Top