ಮಂಗಳೂರು: ಕರಾವಳಿಯಲ್ಲಿ ಎಲ್ಲೋ ಅಲರ್ಟ್ ➤ ಸಾಧರಣ ಮಳೆ ಸಾಧ್ಯತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.06. ಕರಾವಳಿ ಭಾಗದ ಕೆಲವು ಪ್ರದೇಶದಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕರಾವಳಿಯಲ್ಲಿ ಏ.07 ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದಲ್ಲದೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆ ದಾಖಲಾಗಿದೆ. ಇದೇ ರೀತಿ ಮುಂದಿನ ಐದು ದಿನವು ಬರಲಿದೆ ಎಂದು ವರದಿ ತಿಳಿಸಿದೆ.

 

Scroll to Top