(ನ್ಯೂಸ್ ಕಡಬ)newskadaba.com ಕಲಬುರಗಿ, ಏ.06. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಅಫಜಲ್ಪುರ ತಾಲೂಕಿನ ಗೊಬ್ಬರು ಎಸ್ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
ಗೊಬ್ಬೂರ (ಬಿ) ಸರ್ಕಾರಿ ಪ್ರೌಢಶಾಲೆಯಲ್ಲಿ ಏಪ್ರಿಲ್ 3 ರಂದು ನಡೆದ ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಅವಕಾಶಮಾಡಿಕೊಟ್ಟ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಅಧೀಕ್ಷಕರು, ಕಸ್ಟೋಡಿಯನ್, ಜಾಗೃತದಳ, ಕೋಣೆ ಮೇಲ್ವಿಚಾರಕರು ಸೇರಿ 16 ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.