ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಕೋಲಾರ, ಏ.06. ಎರಡು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಪರವನಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ಬಂಗಾರಪೇಟೆ ತಾಲೂಕಿನ ತಂಗೇಡಿಮಿಟ್ಟೆಯ ಗೋಪಾಲ್(25), ಪರವನಹಳ್ಳಿಯ ನಿವಾಸಿ ನವೀನ್(26) ಎಂದು ಗುರುತಿಸಲಾಗಿದೆ. ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

Scroll to Top