ನೆಲ್ಯಾಡಿ: ಹೊಟ್ಟೆ ನೋವಿನಿಂದ ಬಳಲಿ ಯುವತಿಯರಿಬ್ಬರು ಮೃತ್ಯು ➤ ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ)newskadaba.com ನೆಲ್ಯಾಡಿ, ಏ.07. ಹೊಟ್ಟೆ ನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲಾದ ನೆರೆಕರೆಯ ಮನೆಯ ಇಬ್ಬರು ಯುವತಿಯರು ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.

ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಮತ್ತು ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಸುರತ್ಕಲ್ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ.

 

Scroll to Top