ದಿನಾಲೂ ಸ್ವಲ್ಪಮಟ್ಟಿಗೆ ಏರಿಕೆಯಾಗುತ್ತಿರುವ ಪೆಟ್ರೋಲಿಯಂ ಉತ್ಪನ್ನಗಳ ದರ ► ಪೆಟ್ರೋಲ್ ಲೀ.71.72 ಹಾಗೂ ಡೀಸೆಲ್‌ ಲೀ.6183

(ನ್ಯೂಸ್ ಕಡಬ) newskadaba.com ನವದೆಹಲಿ, ಜ.10. ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಪೆಟ್ರೋಲ್ ಬೆಲೆಯನ್ನು ಇದೀಗ ಕೇಂದ್ರ ಸರ್ಕಾರ ಸದ್ದಿಲ್ಲದೇ ಏರಿಕೆ ಮಾಡಿದೆ.

ಗುಜರಾತ್ ಚುನಾವಣೆ ಮುಗಿಯುತ್ತಿದ್ದಂತೆ ತೈಲ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 1.55 ರೂ., ಡೀಸೆಲ್ ಬೆಲೆ ಲೀಟರ್ ಗೆ 1.50 ರೂ. ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 71.72 ರೂ. ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ 61.83 ರೂ. ಆಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಳಿತ ಕಾಣುತ್ತಿದ್ದರೂ, ಕೇಂದ್ರ ಸರ್ಕಾರ ಬೆಲೆ ಇಳಿಕೆ ಮಾಡಿಲ್ಲ ಎಂದು ಇತ್ತೀಚೆಗಷ್ಟೇ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದರು.

Also Read  ಮದುವೆ ಉಡುಗೊರೆಯಾಗಿ ನೀಡಿದ್ದ ಮ್ಯೂಸಿಕ್‌ ಸಿಸ್ಟಮ್‌ನಲ್ಲಿ ಬಾಂಬ್‌..! ➤ ನವ ವಿವಾಹಿತ ಸೇರಿ ಇಬ್ಬರು ಬಲಿ

error: Content is protected !!
Scroll to Top