ಬೆಳ್ತಂಗಡಿ: ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.10. ಪಡಂಗಡಿ ಗ್ರಾಮದ ಬದ್ಯಾರು ಸಮೀಪದ ಕಳೆಂಜಿರೋಡಿ ಜೊಬೆಲ್ಲಾ ಫೆಲಿಕ್ಸ್‌ ಅವರ ಮನೆಗೆ ತೆಂಗಿನ ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಗೀಡಾಗಿರುವ ಘಟನೆ ನಡೆದಿದೆ.

ಫೆಲಿಕ್ಸ್‌ ಅವರ ಪುತ್ರ ನವೀನ ಹಾಗೂ ಆತನ ಪತ್ನಿ, ಇಬ್ಬರು ಮಕ್ಕಳು ಮನೆಯಲ್ಲಿ ವಾಸವಾಗಿದ್ದರು. ಆದರೆ ಪೂಜೆ ನಿಮಿತ್ತ ಅವರೆಲ್ಲರೂ ಚರ್ಚ್‌ಗೆ ತೆರಳಿದ್ದರಿಂದ ಜೀವಹಾನಿ ತಪ್ಪಿದೆ. ಇನ್ನು ಘಟನಾ ಸ್ಥಳಕ್ಕೆ ಪಂಚಾಯತ್‌ ಸಿಬಂದಿ ಭೇಟಿ ನೀಡಿದ್ಧಾರೆ.

 

Scroll to Top