ಉಪ್ಪಿನಂಗಡಿ: ಟ್ಯಾಂಕರ್ ದುರಂತಕ್ಕೆ ಹತ್ತು ವರ್ಷ ! ➤ ಅಚ್ಚಳಿಯದೆ ಉಳಿದ ಕಹಿ ನೆನಪು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಏ.10. ಉಪ್ಪಿನಂಗಡಿ ಸಮೀಪದ ಪೆರ್ಣೆ ಎಂಬಲ್ಲಿ 2013ರ ಏಪ್ರಿಲ್ 9ರಂದು ಸಂಭವಿಸಿದ ಭೀಕರ ಗ್ಯಾಸ್ ಟ್ಯಾಂಕರ್ ದುರಂತದಲ್ಲಿ ವಿವಿಧ ಕುಟುಂಬಗಳ 13 ಮಂದಿ ಮೃತಪಟ್ಟು, ಹಲವರು ಗಾಯಗೊಂಡು 10 ವರ್ಷಗಳು ಕಳೆದರೂ, ದುರಂತದ ಮಾನಸಿಕ ಗಾಯ ಇನ್ನೂ ಮಾಸಿಲ್ಲ.

ಮಂಗಳೂರಿನಿಂದ ಬೆಂಗಳೂರಿನತ್ತ ಅನಿಲ ಸಾಗಾಟದ ಟ್ಯಾಂಕರ್ ಪೆರ್ನೆ ತಿರುವಿನಲ್ಲಿ ಅಪಘಾತಕ್ಕೀಡಾಗಿ ಮಗುಚಿ ಬಿತ್ತು. ಈ ಪರಿಣಾಮ ಅನಿಲ ಸೋರಿಕೆಯುಂಟಾಗಿ ಅಗ್ನಿ ಸ್ಪರ್ಶಗೊಂಡ ಕಾರಣ ಬೆಂಕಿಯ ಕೆನ್ನಾಲಿಗೆಯು ಪರಿಸರದಾದ್ಯಂತ ವ್ಯಾಪಿಸಿ ಮನೆ, ಅಂಗಡಿಯೊಳಗಿದ್ದ ಜನರೆಲ್ಲಾ ಬೆಂಕಿಗೆ ಸಿಲುಕಿದರು. ಇದರಿಂದಾಗಿ ಮಹಿಳೆ ಮಕ್ಕಳನ್ನು ಒಳಗೊಂಡಂತೆ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಾಯಾಳುಗಳ ಪೈಕಿ ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

Also Read  ಮಹಾಮಾರಿ ಕೊರೊನಾಗೆ ಪಡುಬಿದ್ರಿ ವ್ಯಕ್ತಿ ಬಲಿ ➤ ಅಬುಧಾಬಿಯಲ್ಲಿ ಅಂತ್ಯಕ್ರಿಯೆ

 

error: Content is protected !!
Scroll to Top