(ನ್ಯೂಸ್ ಕಡಬ) newskadaba.com.ಬೆಂಗಳೂರು,ಏ.10 ರಾಜಕೀಯ ಪಕ್ಷದ ಪ್ರತಿನಿಧಿಯೊಂದಿಗೆ ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಲೆಕ್ಕ ವಿಚಕ್ಷಣ ತಂಡದ ಮುಖ್ಯಸ್ಥರಾದ ನೆಲಮಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಕ ಅಂಜನ್ ಕುಮಾರ್.ಬಿ.ಜೆ.ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಪಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಆದೇಶಿಸಿದ್ದಾರೆ.
ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಸಂಬಂಧ ಅಂಜನ್ ಕುಮಾರ್.ಬಿ.ಜೆ. ಅವರನ್ನು ನೆಲಮಂಗಲದ ಸೋಲೂರು ಹೋಬಳಿಯಲ್ಲಿ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್‌ನಲ್ಲಿ ಎಸ್.ಎಸ್.ಟಿ ತಂಡದ ಮುಖ್ಯಸ್ಥರಾಗಿ ನೇಮಿಸಲಾಗಿತ್ತು.