ಠಾಣೆಗೆ ದೂರು ನೀಡಲು ಬಂದ ಮಹಿಳೆಯ ಜತೆ ಅನುಚಿತವಾಗಿ ವರ್ತಿಸಿದ SI..!!*  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.11  ದೂರು ನೀಡಲು ಬಂದ ಮಹಿಳೆಯ ಜತೆ ಅನುಚಿತವಾಗಿ ವರ್ತಿಸಿದ ಆರೋಪ, ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯ ಸಬ್​ ಇನ್ಸ್​ಪೆಕ್ಟರ್ ವಿರುದ್ಧ ಕೇಳಿಬಂದಿದೆ. ​ವರದಕ್ಷಿಣೆ ಪ್ರಕರಣ ಸಂಬಂಧ ಮಹಿಳೆಯ ಹೇಳಿಕೆ ಪಡೆಯುವ ನೆಪದಲ್ಲಿ ಮಹಿಳೆಯ ಜತೆ ಎಸ್​ಐ ಮಂಜುನಾಥ ಸ್ವಾಮಿ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.

ಮಹಿಳೆಯ ಅನುಮತಿ ಇಲ್ಲದೆ ಎಲ್ಲೆಂದರಲ್ಲಿ ಮೈ-ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿರುವ ಆಪಾದನೆ ಇದೆ. ಠಾಣೆಯಲ್ಲಿ ಮಾತ್ರವಲ್ಲದೆ, ವಾಟ್ಸ್​ಆಯಪ್​ ಮೆಸೇಜ್ ಮೂಲಕವೂ ಕಿರುಕುಳ ನೀಡುತ್ತಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ. ಮನೆಗೆ ಹೋದ ಬಳಿಕವು ಮಹಿಳೆಗೆ ಕರೆ ಮಾಡಿ ನಿಮ್ಮ ಪೋಟೊಗಳನ್ನು ಕಳುಹಿಸಿ ಎಂದರು ಎಂದು ಮಹಿಳೆ ಹೇಳಿದ್ದಾರೆ. ಸಬ್ ಇನ್ಸ್‌ಪೆಕ್ಟರ್ ಕೃತ್ಯದ ಬಗ್ಗೆ ಮಹಿಳೆ ವಿವರಣೆ ನೀಡಿದ್ದು, ನಗರ ಪೊಲೀಸರಿಗೆ ದೂರು ನೀಡಿದ್ದಾರೆ.

Also Read  ವರ್ಕ್ಔಟ್ ಆಯ್ತು 50% ಡಿಸ್ಕೌಂಟ್ ಆಫರ್!

 

 

 

error: Content is protected !!
Scroll to Top