ಟೆಸ್ಟ್‌ ಡ್ರೈವ್ ವೇಳೆ ಹೊತ್ತಿ ಉರಿದ ಕಾರು ➤ ಇಬ್ಬರು ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಏ.11. ಕಾರ್‌ ಗೆ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದ ಘಟನೆ ಮಧ್ಯಪ್ರದೇಶದ ಇಂದೋರ್‌ನ ಶೆರಾಟನ್ ಗ್ಯಾಂಡ್ ಹೋಟೆಲ್ ಬಳಿ ನಡೆದಿದ್ದು, ಅದೃಷ್ಟವಶಾತ್ ಕಾರೊಳಗಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗ್ಯಾರೇಜ್ ನಡೆಸುತ್ತಿರುವ ಇರ್ಷಾದ್ ಖಾನ್ ಮತ್ತು ಅವರ ಸಹೋದ್ಯೋಗಿ ಹಲೀಂ ಖಾನ್ ಅವರು ಮಹೀಂದ್ರ ಸ್ಕಾರ್ಪಿಯೊವನ್ನು ಟೆಸ್ಟ್ ಡ್ರೈವ್ ಮಾಡಲು ಹೊರಟಿದ್ದು, ಡ್ಯಾಶ್‌ ಬೋರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ, ಟೆಸ್ಟ್ ಡ್ರೈವ್‌ನಲ್ಲಿ ಕಾರಿನಿಂದ ಹೊಗೆ ಬರಲಾರಂಭಿಸಿತು. ಸ್ವಲ್ಪ ಹೊತ್ತಿನಲ್ಲೇ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

 

Scroll to Top