(ನ್ಯೂಸ್ ಕಡಬ)newskadaba.com ನವದೆಹಲಿ, ಏ.11. ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಲಿದ್ದಾರೆ.
ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರಾಜಸ್ಥಾನದ ಜೈಪುರ ಮತ್ತು ದೆಹಲಿ ಕ್ಯಾಂಟ್ ನಡುವೆ ಸಂಚರಿಸಲಿದೆ. ಈ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ನಿಯಮಿತ ಸೇವೆಯು ಏಪ್ರಿಲ್ 13 ರಿಂದ ಪ್ರಾರಂಭವಾಗಲಿದೆ. ಇದು ಜೈಪುರ, ಅಲ್ವಾರ್ ಮತ್ತು ಗುರ್‌ಗಾಂವ್‌ನಲ್ಲಿ ನಿಲುಗಡೆಗಳೊಂದಿಗೆ ಅಜ್ಮೀರ್ ಮತ್ತು ದೆಹಲಿ ಕ್ಯಾಂಟ್ ನಡುವೆ ಕಾರ್ಯನಿರ್ವಹಿಸುತ್ತದೆ.