ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.12. ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆ ಬಿಜೆಪಿ ತನ್ನ ಮೊದಲ ಹಂತದ 189 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ಎಂದು ವರದಿ ತಿಳಿಸಿದೆ. ಬಿಜೆಪಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಂಬಂಧ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಹತ್ವದ ಸಭೆ ನಡೆದಿತ್ತು.


ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಇಂದು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಿತು. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂಬಂಧ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಚರ್ಚೆ ನಡೆಸಿದ್ದರು.

Also Read  ಕುಕ್ಕೆ ಸುಬ್ರಹ್ಮಣ್ಯ : ಗೋ ಕಳ್ಳತನ ನಡೆಸುವವರ ವಿರುದ್ಧ ಕ್ರಮ ಕೈ ಗೊಳ್ಳಲು ಮನವಿ

error: Content is protected !!
Scroll to Top