ಚುನಾವಣಾ ಕರ್ತವ್ಯಲೋಪ ಆರೋಪ ➤ ಮತಗಟ್ಟೆ ಅಧಿಕಾರಿ ಅಮಾನತು

(ನ್ಯೂಸ್ ಕಡಬ)newskadaba.com ಧಾರವಾಡ, ಏ.12. ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಭಾಗ ಸಂಖ್ಯೆ 94 ರ ಮತಗಟ್ಟೆ ಅಧಿಕಾರಿಯಾಗಿದ್ದ ನವೀನ ಡಿ. ಸೂರ್ಯವಂಶಿ ಅವರು ಚುನಾವಣಾ ಕರ್ತವ್ಯ ನಿರ್ವಹಣೆಯಲ್ಲಿ ನಿಷ್ಕಾಳಜಿ ತೋರಿ, ಕಾರ್ಯಲೋಪ ಮಾಡಿರುವುದರಿಂದ ತಕ್ಷಣ ಸರಕಾರಿ ಸೇವೆಯಿಂದ ಅವರನ್ನು ಅಮಾನತ್ತುಗೊಳಿಸಿ, ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಇಂದು ಆದೇಶ ಹೊರಡಿಸಿದ್ದಾರೆ.

ನವೀನ್ ಸೂರ್ಯವಂಶಿ ಅವರು 2023 ರ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯಲೋಪ ಮಾಡಿದ್ದಲ್ಲದೇ, ಸಕಾಲಕ್ಕೆ ಮಾಹಿತಿ, ದಾಖಲೆಗಳನ್ನು ನೀಡದೇ ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದಾರೆ.

 

Scroll to Top