ಶಾಲಾ ಬಾಲಕ ನಾಪತ್ತೆ ! ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಕೊಲ್ಲೂರು, ಏ.13. ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ಕಂಟಗದ್ದೆ ನಿವಾಸಿ ದೇವದತ್ತ (16) ಎಂಬ ಬಾಲಕನು ಮನೆಯಿಂದ ಹೊರಟು ಹೋದವನು ವಾಪಸು ಬಾರದೇ ನಾಪತ್ತೆಯಾದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ.


4 ಅಡಿ 5 ಇಂಚು ಎತ್ತರ, ಕೋಲು ಮುಖ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮಲೆಯಾಳಿ ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ: 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ : 100 (0820-2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

error: Content is protected !!

Join the Group

Join WhatsApp Group