ಬಂಟ್ವಾಳ: KSRTC ಬಸ್ ಮತ್ತು ಬೈಕ್ ಢಿಕ್ಕಿ ➤ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.13. KSRTC ಬಸ್ ಬೈಕ್ ಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.


ಸರಪಾಡಿ ನಿವಾಸಿ ಅವಿವಾಹಿತ ಯುವಕ ಸೇಸಪ್ಪ ಯಾನೆ ಶ್ರೇಯಸ್ (30) ಮೃತಪಟ್ಟಿದ್ದಾನೆ. ಖಾಸಗಿ ಕಂಪೆನಿಯೊಂದರಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಬಡಕುಟುಂಬದ ಯುವಕನಾಗಿದ್ದು, ವೃತ್ತಿ ಮುಗಿಸಿ ಮನೆಗೆ ವಾಪಾಸು ಬೈಕಿನಲ್ಲಿ ಹೋಗುವ ವೇಳೆ ಅಪಘಾತ ಸಂಭವಿಸಿದೆ. ಬಿ.ಸಿರೋಡು ಕಡೆಯಿಂದ ಧರ್ಮಸ್ಥಳ ಹೆದ್ದಾರಿಯಲ್ಲಿ ಶ್ರೇಯಸ್ ಸರಪಾಡಿ ಮನೆಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಧರ್ಮಸ್ಥಳ ಕಡೆಯಿಂದ ವೇಗವಾಗಿ ಬರುತ್ತಿದ್ದ ಸರಕಾರಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬೈಕಿಗೆ ಡಿಕ್ಕಿಯಾಗಿದೆ.

error: Content is protected !!

Join the Group

Join WhatsApp Group