(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.13. ಪೊಲೀಸ್ ಸಿಬ್ಬಂದಿಯೋರ್ವರು ವಾಸ ಸ್ಥಳದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಕೊಲ್ಲಂ ಮೂಲದ ಬೈಜು(54) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕರ್ತವ್ಯಕ್ಕೆ ಹಾಜರಾಗದ ಹಿನ್ನಲೆ ಯಲ್ಲಿ ಪೊಲೀಸ್ ಸಿಬ್ಬಂದಿಗಳು ವಾಸಸ್ಥಳಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ತಲುಪಿ ಮುಂದಿನ ಕ್ರಮ ತೆಗೆದು ಕೊಂಡಿದ್ದಾರೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ.