ವಂಚನೆ ಆರೋಪದಡಿ ಫ್ರೀಡಂ ಆ್ಯಪ್‌ CEO ಸುಧೀರ್‌ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ಅರೆಕಾಲಿಕ ಉದ್ಯೋಗ ಕೊಡಿಸುವುದಾಗಿ ಹೇಳಿ ತಮ್ಮ ಆ್ಯಪ್‌ ಪ್ರಚಾರಕ್ಕೆ ಬಳಸಿಕೊಂಡು ಹಣ ನೀಡದೆ ವಂಚಿಸಿದ ಪ್ರಕರಣ ಸಂಬಂಧ ಇಂಡಿಯನ್‌ ಮಿನಿ ಫ್ರೀಡಂ ಕಂಪನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಿ.ಎಸ್‌.ಸುಧೀರ್‌ನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ‘ಕನ್ನಡಪ್ರಭ’ ಜತೆ ಮಾತನಾಡಿದ ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್‌ ಅವರು, ವಂಚನೆ ಪ್ರಕರಣದಲ್ಲಿ ಫ್ರೀಡಂ ಕಂಪನಿಯ ಸಿಇಒ ಸುಧೀರ್‌ನನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಇತರರ ಪಾತ್ರದ ಬಗ್ಗೆ ಸಹ ತನಿಖೆ ಮುಂದುವರೆದಿದೆ ಎಂದು ಹೇಳಿದರು.

Also Read  ಕರ್ನಾಟಕ ಚಲನಚಿತ್ರ ಅಕಾಡೆಮಿ ➤ ‘ಬೆಳ್ಳಿ ಹೆಜ್ಜೆ’ಯಲ್ಲಿ ನಮ್ಮೊಂದಿಗೆ - ಡಾ. ರಿಚರ್ಡ್ ಕ್ಯಾಸ್ಟಲಿನೋ

error: Content is protected !!