ಪತ್ನಿಯ ಕೊಲೆಗೆ ಯತ್ನಿಸಿ ಪತಿ ಆತ್ಮಹತ್ಯೆ ➤ ದೂರು ದಾಖಲು



(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.15. ಪತ್ನಿಯ ಕೊಲೆಗೆತ್ನಿಸಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆದೂರು ಠಾಣಾ ವ್ಯಾಪ್ತಿಯ ಬೋವಿಕ್ಕಾನದಲ್ಲಿ ನಡೆದಿದೆ. ಮುದಲಪ್ಪಾರೆಯ ಮಣಿ (40) ಆತ್ಮಹತ್ಯೆಗೈದವರು ಎಂದು ಗುರುತಿಸಲಾಗಿದೆ. ಪತ್ನಿ ಸುಗಂಧಿ(35)ಯನ್ನು ಇರಿತದ ಗಾಯಗಳೊಂದಿಗೆ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.








ಕ್ಷುಲ್ಲಕ್ಕ ಕಾರಣಕ್ಕಾಗಿ ಮಧ್ಯಾಹ್ನ ಇಬ್ಬರ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ. ಈ ಸಂದರ್ಭದಲ್ಲಿ ಮಣಿ ಪತ್ನಿ ಸುಗಂಧಿಗೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ಬಳಿಕ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ.ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.






error: Content is protected !!
Scroll to Top