ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 130 ಸೀಟು ಖಚಿತ ➤ವೀರಪ್ಪ ಮೊಯ್ಲಿ

(ನ್ಯೂಸ್ ಕಡಬ) newskadaba.com. ನವದೆಹಲಿ, .17. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಕನಿಷ್ಠ 130 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಗೆ ಹೆಬ್ಬಾಗಿಲು ಎಂಬ ವಿಚಾರವೇ ಈ ವಿಧಾನಸಭೆ ಚುನಾವಣೆಯಲ್ಲಿ ಅಳಿಸಿ ಹೋಗಲಿದೆ. ಈ ವಿಧಾನಸಭಾ ಚುನಾವಣೆಯ ಫಲಿತಾಂಶ ಬಿಜೆಪಿಯ ದಕ್ಷಿಣ ಭಾರತದ ಹೆಬ್ಬಾಗಿಲನ್ನು ಸಂಪೂರ್ಣವಾಗಿ ಮುಚ್ಚಲಿದೆ  ಎಂದು ಹೇಳಿದರು.

ಜೆಡಿಎಸ್ ಕೂಡ ಬಿಜೆಪಿ ಜತೆ ರಹಸ್ಯ ಹೊಂದಾಣಿಕೆ ಮಾಡಿಕೊಂಡಿದೆ. ಕೇಂದ್ರದಲ್ಲಿ ಸರಕಾರ ರಚನೆಯಲ್ಲಿ ಕರ್ನಾಟಕ ಯಾವಾಗಲೂ ನಿರ್ಣಾಯಕ ಪಾತ್ರ ವಹಿಸುತ್ತದೆ. 2024ರ ಲೋಕಸಭೆ ಚುನಾವಣೆಗೂ ಈ ಫಲಿತಾಂಶ ಮುಖ್ಯ ಭೂಮಿಕೆ ವಹಿಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

error: Content is protected !!

Join the Group

Join WhatsApp Group