ಮಿಲಿಟರಿ ಸ್ಟೇಷನ್ ಮೇಲೆ ಗುಂಡಿನ ದಾಳಿ ಪ್ರಕರಣ ➤ ಯೋಧನ ಬಂಧನ

(ನ್ಯೂಸ್ ಕಡಬ) newskadaba.com. ಬಟಿಂಡಾ, .17. ಮಿಲಿಟರಿ ಸ್ಟೇಷನ್ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ, ಸೇನಾ ಗನ್ನರ್ ಘಟಕದ ಮೋಹನ್ ದೇಸಾಯಿ ಎಂಬ ಯೋಧ  ರೈಫಲ್ ಅನ್ನು ಕದ್ದು ತನ್ನ ನಾಲ್ವರು ಸಹೋದ್ಯೋಗಿಗಳನ್ನು ಕೊಂದಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ.

ಪ್ರಾಥಮಿಕ ತನಿಖೆಗಳ ಪ್ರಕಾರ ಇದು ವೈಯಕ್ತಿಕ ಹಗೆತನದಿಂದ ಈ ಘಟನೆ ನಡೆದಿದೆ ಎಂದು ಸ್ಪಷ್ಟವಾಗಿ ಕಂಡುಬಂದಿದೆ ಎಂದು HQ ಸೌತ್ ವೆಸ್ಟರ್ನ್ ಕಮಾಂಡ್ ತಿಳಿಸಿದ್ದಾರೆ. ಇದೀಗ ಆ ಯೋಧನನ್ನು ಬಂಧನ ಮಾಡಲಾಗಿದೆ ಎಂದು ಹೇಳಲಾಗಿದೆ. ಗುಂಡಿನ ದಾಳಿಗೆ ಸಂಬಂಧಿಸಿದಂತೆ ನಾಲ್ವರು ಯೋಧರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ. ಫೈರಿಂಗ್ ಘಟನೆಯ ಸಾಕ್ಷಿ ಮೇಜರ್ ಅಶುತೋಷ್ ಶುಕ್ಲಾ ಅವರ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Also Read  ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು

 

error: Content is protected !!
Scroll to Top