ನಾವೇನೂ ನಾಟಕ ಆಡಲು ಬಂದಿಲ್ಲ: ಪೊಲೀಸರ ವಿರುದ್ಧ ಹೇಳಿಕೆ ನೀಡುವವರಿಗೆ ಎಚ್ಚರಿಕೆ ನೀಡಿದ ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜ.11. ‘ಹಾವಿನ ಜೊತೆ ಸರಸವಾಡುವ ಕೆಲಸವನ್ನು ಯಾರೂ ಮಾಡಬೇಡಿ. ಹಾವಿನ ತಲೆಯಲ್ಲಿ ಹಿಡಿದರೂ ಹಾವು ಕಚ್ಚುತ್ತದೆ. ಬಾಲದಲ್ಲಿ ಹಿಡಿದರೂ ಹಾವು ಕಚ್ಚುತ್ತದೆ’ ಎಂದು ಮೂಡಿಗೆರೆ ಕಾಲೇಜು ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್ ಇಲಾಖೆಯ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವವರಿಗೆ ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಅಣ್ಣಾಮಲೈ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕೆಲವು ಸಂಘಟನೆಯವರು ಪೊಲೀಸ್ ಇಲಾಖೆಯ ಬಗ್ಗೆ ಬಾಯಿಗೆ ಬಂದಂತೆ ಮಾತನಾಡ್ತಿದ್ದಾರೆ. ನಾವು ಖಾಕಿ ಬಟ್ಟೆ ಹಾಕಿ ಇಲ್ಲಿಗೆ ನಾಟಕ ಆಡಲು ಬಂದಿಲ್ಲ. ನಮಗೆ ಎಲ್ಲಾ ಧರ್ಮವೂ ಒಂದೇ. ಇಲಾಖೆಯ ಬಗ್ಗೆ ಕೇವಲವಾಗಿ ಮಾತನಾಡಿರುವವರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತೇವೆ. ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಪ್ರಕರಣದಲ್ಲಿ ಎಷ್ಟೇ ದೊಡ್ಡ ವ್ಯಕ್ತಿಗಳಿದ್ದರೂ, ಎಷ್ಟೇ ಒತ್ತಡ ಬಂದರೂ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಸ್‌ಪಿ ಅಣ್ಣಾಮಲೈ ಎಚ್ಚರಿಕೆ ನೀಡಿದ್ದಾರೆ.

Also Read  ಉಡುಪಿ: ಸಿಎಂ ಬೊಮ್ಮಯಿ ಹೆಲಿಕಾಪ್ಟರ್ ಲ್ಯಾಂಡ್ ವೇಳೆ ಹೆಲಿಪ್ಯಾಡ್ ಬಳಿ ಬೆಂಕಿ

ಮೃತ ಧನ್ಯಶ್ರೀಗೆ ಸಂತೋಷ್ ಸೇರಿದಂತೆ ಐವರು ಸಂಘಟನೆಯ ಕಾರ್ಯಕರ್ತರು ಧಮ್ಕಿ ಹಾಕಿದ್ದ ಹಿನ್ನೆಲೆಯಲ್ಲಿ ಧನ್ಯಶ್ರೀ ಆತ್ಮಹತ್ಯೆಗೆ ಮುನ್ನ 36 ಗಂಟೆ ಏನನ್ನೂ ತಿನ್ನದೆ ಖಾಲಿ ಹೊಟ್ಟೆಯಲ್ಲಿ ಇದ್ದದ್ದು ಮರಣೋತ್ತರ ಪರೀಕ್ಷೆಯಿಂದ ಧೃಡಪಟ್ಟಿದೆ. ಪೊಲೀಸ್ ಇಲಾಖೆಯು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದು, ಸತ್ಯಾಂಶ ಹೊರಬರಲಿದೆ ಎಂದಿದ್ದಾರೆ.

error: Content is protected !!
Scroll to Top