ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ಬಿಡುಗಡೆ ಮಾಡಿದ್ದ ₹55 ಕೋಟಿ ದುರ್ಬಳಕೆ.!  

(ನ್ಯೂಸ್ ಕಡಬ)Newskadaba.com ಬೆಂಗಳೂರು ,ಏ.19 ರಾಜ್ಯ ಸಾರಿಗೆ ಇಲಾಖೆಯ ಅಧೀನದಲ್ಲಿರುವ ಡಿ. ದೇವರಾಜ ಅರಸು ಟ್ರಕ್‌ ಟರ್ಮಿನಲ್‌ನಲ್ಲಿ ಕಾಮಗಾರಿಯನ್ನೇ ನಡೆಸದೆ ₹ 55 ಕೋಟಿ ದುರ್ಬಳಕೆ ಮಾಡಿರುವ ಆರೋಪದ ಕುರಿತು ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದು, ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಶೋಧ ನಡೆಸಿದ್ದಾರೆ.

ಲಾರಿ ಚಾಲಕರು ಮತ್ತು ಸಿಬ್ಬಂದಿಯ ಬಳಕೆಗಾಗಿ ರಾಜ್ಯದ ವಿವಿಧೆಡೆ ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ಬಿಡುಗಡೆ ಮಾಡಿದ್ದ ₹55 ಕೋಟಿಯನ್ನು ಅರಸು ಟ್ರಕ್‌ ಟರ್ಮಿನಲ್‌ ಅಧ್ಯಕ್ಷ ಡಿ.ಎಸ್‌. ವೀರಯ್ಯ ಮತ್ತು ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಶಂಕರಪ್ಪ ಸೇರಿ ಕಾಮಗಾರಿ ನಡೆಸದೇ ವಿವಿಧ ಕಂಪನಿಗಳ ಖಾತೆಗಳಿಗೆ ವರ್ಗಾಯಿಸಿ ಅಕ್ರಮ ಎಸಗಿದ್ದಾರೆ ಎಂಬ ಆರೋಪದ ಕುರಿತು ತನಿಖೆ ಆರಂಭಿಸಲಾಗಿದೆ.

Also Read  ಕರಡಿ ದಾಳಿ- ರೈತನಿಗೆ ಗಾಯ

 

error: Content is protected !!
Scroll to Top