ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿ ಬಾಲಕರಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ತುಮಕೂರು, ಏ.20. ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಮೃತಪಟ್ಟ ಘಟನೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ. ನಿತೇಶ್(14), ಪ್ರಜ್ವಲ್(13) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.


ಬಾಲಕರು ಮನೆ ಮೇಲೆ ಆಟವಾಡುತ್ತಿದ್ದಾಗ ತಂತಿ ತಗುಲಿ ಈ ದುರಂತ ಸಂಭವಿಸಿದ್ದು, ಕೆಇಬಿ ವಿರುದ್ಧ ಗ್ರಾಮಸ್ಥರು ಹಾಗೂ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

Scroll to Top