ಲಂಚದ ರೂಪದಲ್ಲಿ ಲ್ಯಾಪ್‌ಟಾಪ್ ಪಡೆಯುತ್ತಿದ್ದಾಗ ಅಗ್ನಿಶಾಮಕ ಅಧಿಕಾರಿ ಲೋಕಾಯುಕ್ತ ಬಲೆಗೆ.!  

(ನ್ಯೂಸ್ ಕಡಬ)Newskadaba.com ದಾವಣಗೆರೆ,ಏ.20 ದಾವಣಗೆರೆ ಶಾಲೆಯ ಮಾನ್ಯತೆ ನವೀಕರಣಕ್ಕೆ ಅಗತ್ಯವಿದ್ದ ನಿರಾಕ್ಷೇಪಣಾ ಪತ್ರ (ಎನ್‌ಒಸಿ)ವನ್ನು ನೀಡಲು ಲಂಚದ ರೂಪದಲ್ಲಿ ಲ್ಯಾಪ್‌ಟಾಪ್ ಪಡೆಯುತ್ತಿದ್ದಾಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಸವಪ್ರಭು ಶರ್ಮ ಹಾಗೂ ಫೈರ್‌ಮನ್ ಎಸ್.ಕೆ. ರಾಜೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಡೆಲ್‌ ಕಂಪನಿಯ ₹ 38,500 ಬೆಲೆಯ ಲ್ಯಾಪ್‌ಟಾಪ್ ಅನ್ನು ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

 

Scroll to Top