ಪೂಂಚ್‌: ಬೆಂಕಿ ತಗುಲಿ ಹೊತ್ತಿ ಹುರಿದ ಭಾರತೀಯ ಸೇನಾ ವಾಹನ; ಇಬ್ಬರು ಯೋಧರು ಹುತಾತ್ಮ!

(ನ್ಯೂಸ್ ಕಡಬ) newskadaba.com. ಜಮ್ಮುಕಾಶ್ಮೀರ, ಏ.20. ಪೂಂಜ್ ನಲ್ಲಿ ಬೆಂಕಿ ತಗುಲಿ ಭಾರತೀಯ ಸೇನಾ ವಾಹನ ಹೊತ್ತಿ ಉರಿದು ಇಬ್ಬರು ಸೇನಾ ಯೋಧರು ಹುತಾತ್ಮರಾದ ಘಟನೆ ನಡೆದಿದೆ.

ವರದಿಗಳ ಪ್ರಕಾರ, ಪೂಂಚ್-ಜಮ್ಮು ಹೆದ್ದಾರಿಯಲ್ಲಿ ಸೇನಾ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಟ್ರಕ್‌ನಲ್ಲಿದ್ದ ಇಬ್ಬರು ಯೋಧರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಹುತಾತ್ಮರಾಗಿದ್ದಾರೆ. ಆದರೂ ಸೇನೆಯ ಅಧಿಕೃತ ಹೇಳಿಕೆ ಇನ್ನೂ ಬಂದಿಲ್ಲ. ಇದರೊಂದಿಗೆ ಯೋಧರ ವಾಹನಕ್ಕೆ ಬೆಂಕಿ ತಗುಲಿದ ಹಿಂದೆ ಭಯೋತ್ಪಾದಕರ ಸಂಚು ಇದೆಯೋ ಅಥವಾ ಅಪಘಾತವೋ ಎಂಬುದು ಇನ್ನೂ ಸ್ಪಷ್ಟವಾಗ ಬೇಕಾಗಿದೆ.

error: Content is protected !!