(ನ್ಯೂಸ್ ಕಡಬ)newskadaba.com ನವದೆಹಲಿ, ಏ.23. ಸಂಘರ್ಷ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರ ಪರಿಸ್ಥಿತಿ ಬಗ್ಗೆ ಚರ್ಚಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ಸರ್ಕಾರಿ ಅಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆಯಲ್ಲಿ ವಿದೇಶಾಂಗ ಸಚಿವರು, ರಾಷ್ಟ್ರೀಯ ಭದ್ರತಾ ಸಲಹೆಗಾರರು, ಸುಡಾನ್ ಗಿರುವ ಭಾರತದ ರಾಯಭಾರಿ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಇನ್ನು ಸುಡಾನ್‌ನಲ್ಲಿರುವ 3,000ಕ್ಕಿಂತಲೂ ಅಧಿಕ ಭಾರತೀಯರ ಸುರಕ್ಷೆ ಬಗ್ಗೆ ಗಮನಹರಿಸುವಂತೆ ಹೇಳಿದ್ದಾರೆ.