ರಾಷ್ಟ್ರಧ್ವಜ ಬಳಸಿ ಚಿಕನ್ ಕ್ಲೀನ್ ಮಾಡಿದ ವ್ಯಕ್ತಿಯ ಬಂಧನ

(ನ್ಯೂಸ್ ಕಡಬ)newskadaba.com ಸಿಲ್ವಾಸ್ಸಾ, ಏ.23. ಕೇಂದ್ರಾಡಳಿತ ಪ್ರದೇಶವಾದ ದಾದರ್ ಮತ್ತು ನಗರ್ ಹವೇಲಿಯ ಸಿಲ್ವಾಸ್ಸಾದ ವ್ಯಕ್ತಿಯೊಬ್ಬರು ತ್ರಿವರ್ಣ ಧ್ವಜದಿಂದ ಕೋಳಿಯನ್ನು ಶುಚಿಗೊಳಿಸಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.

ರಾಷ್ಟ್ರಧ್ವಜ ಬಳಸಿ ಚಿಕನ್ ಸ್ವಚ್ಛಗೊಳಿಸುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಸಿಲ್ವಾಸ್ಸಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Scroll to Top