ಮಂಗಳೂರು: ಬಂಟ್ವಾಳದ ಯುವಕನ ಮೃತದೇಹ ಬೀಚ್ ನಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.23. ಮನೆಯಿಂದ ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ.

ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮಂಗಳೂರಿನ ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಯುವಕನ ಮೃತದೇಹ ಪತ್ತೆಯಾಗಿದ್ದು, ಪಣಂಬೂರು ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Scroll to Top