ಸುಳ್ಯದಲ್ಲಿ ತಾಯಿ ಮಗಳು ಒಟ್ಟಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ..!

(ನ್ಯೂಸ್ ಕಡಬ)Newskadaba.com ಸುಳ್ಯ,ಏ.23  ಸುಳ್ಯದ ತಾಯಿ ಮತ್ತು ಮಗಳು ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಫಲಿತಾಂಶಕ್ಕೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಸಾಕ್ಷಿಯಾಗಿದೆ. ಸುಳ್ಯ ಜಯನಗರದ ರಮೇಶ್‌ ಎಂಬವರ ಪತ್ನಿ ಗೀತಾ ಮತ್ತು ಅವರ ಪುತ್ರಿ ತ್ರಿಷಾ ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ ಮತ್ತು ಮಗಳು.

ಸುಳ್ಯ ಪೊಲೀಸ್‌ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿರುವ ಗೀತಾ ವೃತ್ತಿ ಜೀವನದ ಮಧ್ಯೆ ಅಧ್ಯಯನ ನಡೆಸಿ ಖಾಸಗಿಯಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದು 45ನೇ ವರ್ಷದಲ್ಲಿ ಉತ್ತೀರ್ಣರಾಗಿದ್ದಾರೆ. ಮಗಳು ತೃಷಾ ಸುಳ್ಯದ ಜೂನಿಯರ್‌ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಓದಿ ಪರೀಕ್ಷೆ ಬರೆದು ಪಾಸಾಗಿದ್ದಾರೆ.

Also Read  ಲಡ್ಡು ಪ್ರಸಾದದಲ್ಲಿ ಗುಟ್ಕಾ ಪತ್ತೆ..!

 

error: Content is protected !!
Scroll to Top