ಏ.27ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳೂರಿನಲ್ಲಿ ರೋಡ್ ಶೋ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.23. ಎಪ್ರಿಲ್ 27 ರಂದು ಸಂಜೆ 5 ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳೂರು ನಗರದ ಕಲೆಕ್ಟರ್ಸ್ ಗೇಟ್‌‌ನಿಂದ ನೆಹರೂ ಮೈದಾನದವರೆಗೆ ಸುಮಾರು ಎರಡು ಕಿಮೀ ರೋಡ್ ಶೋ ನಡೆಸಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರೋಜಿ ಜಾನ್ ತಿಳಿಸಿದ್ದಾರೆ.

ಎಪ್ರಿಲ್ 27 ರಂದು ಅದ್ದೂರಿ ರೋಡ್ ಶೋ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಕ್ಷೇತ್ರಗಳ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು. ಇನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎ.24 ರಂದು ಮಂಗಳೂರಿಗೆ ಆಗಮಿಸಲಿದ್ದು ಮರುದಿನ ಸುಳ್ಯ ಮತ್ತು ಮಂಗಳೂರಿನಲ್ಲಿ ಕಾರ್ಯಕರ್ತರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರೋಜಿ ಜಾನ್ ತಿಳಿಸಿದ್ದಾರೆ.

Also Read  ಧರ್ಮಸ್ಥಳ ಬಜರಂಗದಳ ಮುಖಂಡನಿಂದ ದಲಿತ ವ್ಯಕ್ತಿಯ ಹತ್ಯೆ ➤ ಅಲ್ ಇಂಡಿಯಾ ಲಾಯರ್ಸ್ ಕೌನ್ಸಿಲ್ ಕರ್ನಾಟಕ ತಂಡ ಭೇಟಿ

 

error: Content is protected !!
Scroll to Top