(ನ್ಯೂಸ್ ಕಡಬ)newskadaba.com ದಾವಣಗೆರೆ, ಏ.23. ಕಾಣೆಯಾದ ಮಹಿಳೆಯನ್ನು ಪತ್ತೆ ಹಚ್ಚಿ ಮನೆಗೆ ಕಳುಹಿಸಲು 50 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಪಿಎಸ್ಐ ಹಾಗೂ ಪೊಲೀಸ್ ಕಾನಸ್ಟೇಬಲ್ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಶಿವನಗೌಡ ಹಾಗೂ ಪೋಲಿಸ್ ಕಾನಸ್ಟೇಬಲ್ ಲಿಂಗರಾಜ್ ನಾಯ್ಕ ಲೋಕಾಯುಕ್ತ ಬಲೆಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.