ಕುಂದಾಪುರ: ಆನೆಗುಡ್ಡೆಯಲ್ಲಿ ಸರಣಿ ಅಪಘಾತ   ➤ ಓರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಕುಂದಾಪುರ, ಏ.24. ರಾಷ್ಟ್ರೀಯ ಹೆದ್ದಾರಿ 66ರ ಕುಂಭಸಿಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಎದುರುಗಡೆ ಜೀಪು, ಸ್ಕೂಟಿ ಬೈಕ್ ಹಾಗೂ ಸೈಕಲ್ ನಡುವೆ ಸರಣಿ ಅಪಘಾತದಿಂದ ಸ್ಕೋಟಿ ಸವಾರ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿ ತೆಕ್ಕಟೆ ನಾಗರಾಜ್ ದೇವಾಡಿಗ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಕುಂದಾಪುರ ಕಡೆಗೆ ಅತೀ ವೇಗ ಅಜಾಗ್ರತೆಯಿಂದ ಬಂದ ಜೀಪು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಸ್ಕೋಟಿಗೆ ಢಿಕ್ಕಿ ಹೊಡೆದು ಮುಂದೆ ಸಾಗಿ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ನಂತರ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ ಬೈಕ್ ಗೆ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಂದಕ್ಕೆ ನುಗ್ಗಿದೆ.

Scroll to Top