ವಿಷ ಸೇವಿಸಿ ನವ ವಿವಾಹಿತೆ ಆತ್ಮಹತ್ಯೆ.!

(ನ್ಯೂಸ್ ಕಡಬ)Newskadaba.com ಮಂಗಳೂರು,ಏ.24 ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವ ವಿವಾಹಿತೆ ಸಾವನ್ನಪ್ಪಿದ್ದಾರೆ. ಐದು ತಿಂಗಳ ಹಿಂದೆ ಮದುವೆಯಾಗಿದ್ದ ಕೌಶಲ್ಯ(27) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಪ್ಪದಕೋಡಿ ನಿವಾಸಿಯಾಗಿರುವ ಕೌಶಲ್ಯ ಮೂರು ದಿನಗಳ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಕೌಶಲ್ಯ ಸಾವನ್ನಪ್ಪಿದ್ದಾರೆ.

 

 

 

Scroll to Top