ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ.!   ➤ ನೀತಿ ಸಂಹಿತೆ ಅಂತ್ಯಗೊಂಡ ಬಳಿಕ ಡಿಎ ಹೆಚ್ಚಳ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25 ರಾಜ್ಯ ಸರ್ಕಾರಿ ನೌಕರರಿಗೆ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದು ಅಂತ್ಯಗೊಂಡ ಬಳಿಕ ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಶೇಕಡ 4 ತುಟ್ಟಿಭತ್ಯೆ ಹೆಚ್ಚಳ ಮಂಜೂರು ಆದೇಶ ಹೊರಬೀಳಲಿದೆ ಎಂದು ತಿಳಿಸಿದ್ದಾರೆ.

ಮೇ 13 ರಂದು ಚುನಾವಣಾ ನೀತಿ ಸಂಹಿತೆ ಅಂತ್ಯಗೊಳ್ಳಲಿದ್ದು, ಇದಾದ ಬಳಿಕ ತುಟ್ಟಿಭತ್ಯೆ ಮಂಜೂರು ಆದೇಶ ಹೊರಬೀಳಲಿದೆ.ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಈ ಕುರಿತಂತೆ ರಾಜ್ಯ ಸರ್ಕಾರಕ್ಕೆ ಸೂಚನೆಯನ್ನು ನೀಡಿದೆ ಎಂದು ಸಿ.ಎಸ್. ಷಡಕ್ಷರಿ ಹೇಳಿದ್ದಾರೆ.

Also Read  ಉಡುಪಿ : ಇಂದು ರಾತ್ರಿಯಿಂದ ಉಡುಪಿ ಜಿಲ್ಲೆಯ ಗಡಿಗಳು 14ದಿನಗಳ ಕಾಲ ಸೀಲ್‌ಡೌನ್

 

 

 

error: Content is protected !!
Scroll to Top