ಮಂಗಳೂರು: ಎರಡು ದಿನಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯ ➤ ಸಾರ್ವಜನಿಕರು ಸಹಕರಿಸುವಂತೆ ಮನವಿ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.25. ನಗರ ಪಾಲಿಕೆ ವ್ಯಾಪ್ತಿಯಲ್ಲಿ ಎರಡು ದಿನಗಳ ಕಾಲ ಸಾರ್ವಜನಿಕರಿಗೆ ನೀರಿನ ಸಮಸ್ಯೆ ಎದುರಾಗಲಿದೆ. ನೀರು ಸರಬರಾಜು ವ್ಯತ್ಯಯಗೊಳ್ಳಲಿದೆ.


ನಗರಕ್ಕೆ ನೀರು ಸರಬರಾಜು ಮಾಡುವ ತುಂಬೆ ಅಣೆಕಟ್ಟಿನಲ್ಲಿ ತಾಂತ್ರಿಕ ಕಾಮಗಾರಿ ಹಿನ್ನೆಲೆಯಲ್ಲಿ ಎ.27ರಂದು ಬೆಳಗ್ಗೆ 6ಗಂಟೆಯಿಂದ 29ರ ಬೆಳಗ್ಗೆ 6 ಗಂಟೆಯವರೆಗೆ 48ಗಂಟೆಗಳ ಕಾಲ ನೀರು ಪೂರೈಕೆ ಸ್ಥಗಿತಗೊಳಿಸಲಾಗಿದೆ.

Scroll to Top