ಕಡಬ: ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬೈಕ್ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಎ.25. ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ – ಪಂಜ ರಸ್ತೆಯ ಕಲ್ಲಂತಡ್ಕ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಮೃತ ಸವಾರನನ್ನು ದಾವಣಗೆರೆ ಮೂಲದ ಪ್ರಸ್ತುತ ಕೋಡಿಂಬಾಳದಲ್ಲಿ ವಾಸವಿರುವ ಮಂಜು ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಮಂಜು ಬೈಕಿನಲ್ಲಿ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್ ರಸ್ತೆಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಮಂಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Also Read  ಉಡುಪಿ: 55 ಕೇಂದ್ರಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ➤ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ

error: Content is protected !!
Scroll to Top