ಲಿಫ್ಟ್ ನಲ್ಲಿ ಸಿಲುಕಿ ಯುವಕ ಮೃತ್ಯು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 ಬೆಂಗಳೂರಿನ ಜೆಸಿ ರಸ್ತೆ ಭರತ್ ಸರ್ಕಲ್ ಬಳಿ ಲಿಫ್ಟ್ ನಲ್ಲಿ ಸಿಲುಕಿ ಯುವಕ ಮೃತಪಟ್ಟಿದ್ದಾನೆ. ಜೆಪಿ ರಸ್ತೆ ಭರತ್ ಸರ್ಕಲ್ ಸಮೀಪದ ಕಮರ್ಷಿಯಲ್ ಬಿಲ್ಡಿಂಗ್ ನಲ್ಲಿ ಘಟನೆ ನಡೆದಿದೆ.ಸಂಜಯ್ ಆಟೋಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ವಿಕಾಸ್(23) ಮೃತಪಟ್ಟ ಯುವಕ ಎಂದು ಹೇಳಲಾಗಿದೆ.

ಆರು ತಿಂಗಳ ಹಿಂದೆ ಬೆಂಗಳೂರಿಗೆ ಕೆಲಸಕ್ಕೆ ಬಂದಿದ್ದ ವಿಕಾಸ್ ಸಾವಿನ ವಿಚಾರವನ್ನು ಪೊಲೀಸರು ಪೋಷಕರಿಗೆ ತಿಳಿಸಿದ್ದಾರೆ. ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಕಲಾಸಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

 

 

Scroll to Top