(ನ್ಯೂಸ್ ಕಡಬ)Newskadaba.com ಮೈಸೂರು,ಏ.27 ರಾಜ್ಯದೆಲ್ಲೆಡೆ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿಯೇ ಸಾಗುತ್ತಿದೆ. ಈ ನಡುವೆ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪರ ಅವರ ಸೊಸೆ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.
ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಸೊಸೆ ಸ್ಮಿತಾ ರಾಕೇಶ್ ಸಿದ್ದರಾಮಯ್ಯ, ಮನೆ ಮನೆಗೆ ತೆರಳಿ ಮತಯಾಚಿಸಿದ್ದಾರೆ. ಇದೇ ವೇಳೆ ಈ ಬಾರಿ ಅತಿಹೆಚ್ಚು ಮತಗಳಿಂದ ಮಾವನವರನ್ನ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.