ಚುನಾವಣಾ ಆಯೋಗದಿಂದ ಭರ್ಜರಿ ಸಿದ್ಧತೆ !  ➤ ರಾಜ್ಯಾದ್ಯಂತ 10 ಸಾವಿರ ಸರ್ಕಾರಿ ಬಸ್ ಬುಕ್ಕಿಂಗ್ ➤ ಮೇ 5ರಿಂದ 13ರ ವರೆಗೂ ಪ್ರಯಾಣಿಕರನ್ನು ಕಾಡಲಿದೆ ಬಸ್‌ಗಳ ಕೊರತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಕಾರ್ಯಕ್ಕೆ ಬೇಕಾದ ಬಸ್​ಗಳ ವ್ಯವಸ್ಥೆಗೆ ಚುನಾವಣಾ ಅಧಿಕಾರಿಗಳು ಈಗಾಗಲೇ ಬುಕಿಂಗ್ ಮಾಡಿಕೊಳ್ಳುತ್ತಿದ್ದು, ಈಗಾಗಲೇ ರಾಜ್ಯಾದ್ಯಂತ 10 ಸಾವಿರ ಸರ್ಕಾರಿ ಬಸ್ಸುಗಳನ್ನು ಬುಕ್ಕಿಂಗ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಬಸ್‌ ಕೊರತೆ ಉಂಟಾದಲ್ಲಿ ಪ್ರಯಾಣಿಕರ ಸಂಚಾರಕ್ಕೂ ಬಿಸಿ ತಟ್ಟಲಿದೆ.

ಚುನಾವಣಾ ಅಧಿಕಾರಿಗಳು ಚುನಾವಣೆ​ಗೆ ಬೇಕಾದ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳುತ್ತಿದ್ದು, ಎಲೆಕ್ಷನ್ ಸಿದ್ದತೆಗೆ ಬೇಕಾದ ಸಾರಿಗೆ ವ್ಯವಸ್ಥೆಗೆ ರಾಜ್ಯಾದ್ಯಂತ ಅಂದಾಜು 10 ಸಾವಿರ ಬಿಎಂಟಿಸಿ, ಕೆಎಸ್​ಆರ್​ಟಿಸಿ ಹಾಗೂ ಆರ್​ಟಿಒ ವಾಹನಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ವರದಿ ತಿಳಿಸಿದೆ.

Also Read  ನೇಣು ಬಿಗಿದು ಯುವಕ-ಯುವತಿ ಅತ್ಮಹತ್ಯೆ

 

error: Content is protected !!
Scroll to Top