ಜೆಡಿಎಸ್ ಅಭ್ಯರ್ಥಿ ನಾಮಪತ್ರ ಹಿಂಪಡೆದ ಪ್ರಕರಣ         ➤ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.27. ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ಎಂಬವರನ್ನು ಜೀವ ಬೆದರಿಕೆಯೊಡ್ಡಿ ನಾಮಪತ್ರ ವಾಪಸ್ ಪಡೆದಿರುವ ಘಟನೆಗೆ ಸಂಬಂಧಿಸಿ ಕಾಂಗ್ರೆಸ್ ಬೆಂಬಲಿತ ಮಾಜಿ ಕೌನ್ಸಿಲರುಗಳಿಬ್ಬರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳ್ಳಾಲ ಪುರಸಭೆಯ ಕಾಂಗ್ರೆಸ್ ಬೆಂಬಲಿತ ಮಾಜಿ ಕೌನ್ಸಿಲರುಗಳಾದ ಮುಸ್ತಾಫ ಯಾನೆ ಖಬುರು ಮುಸ್ತಾಫ, ಉಸ್ಮಾನ್ ಕಲ್ಲಾಪು , ರಿಯಾಝ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

Also Read  29 ಕೋಟಿ ಆಸ್ತಿ ಮಾಡಿ ,40 ಪ್ರಕರಣಗಳಲ್ಲಿ ಭಾಗಿಯಾಗಿರುವ ಬಿಜೆಪಿಯ ಅಭ್ಯರ್ಥಿ...! ➤ಮಣಿಕಂಠ ರಾಠೋಡ್

 

error: Content is protected !!
Scroll to Top