ವಿವಾಹಿತ ಮಹಿಳೆ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ವಿಜಯಪುರ, ಏ.27. ವಿವಾಹಿತೆ ಮಹಿಳೆಯೊಬ್ಬರು ಲೈವ್ ವಿಡಿಯೋ ಮಾಡಿ ನೇಣಿಗೆ ಶರಣಾಗಿರುವ ಘಟನೆ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ.


ಸುಹಾನಾ ಸೋನಾರ್ (21)ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ. ಸುಹಾನಾಗೆ, ಅಲ್ತಾಫ್ ಎಂಬಾತನ ಜೊತೆ ಇತ್ತೀಚೆಗೆ ಸಲುಗೆಯಾಗಿತ್ತು. ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಮರ್ಯಾದೆಗೆ ಹೆದರಿ ಸುಹಾನಾ ಲೈವ್ ವಿಡಿಯೋ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

Scroll to Top