ಹವಾಮಾನ ವರದಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.28. ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಶಿವಮೊಗ್ಗ, ರಾಮನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Also Read  ಮೊಬೈಲ್ ಇಂಟರ್ನೆಟ್ ಸೇವೆ ➤ ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಇಂದಿನಿಂದ ಚಾಲ್ತಿ

ಸುಬ್ರಹ್ಮಣ್ಯ, ಭಾಗಮಂಡಲ, ಶೃಂಗೇರಿ, ಬಾಳೆಹೊನ್ನೂರು, ಉಪ್ಪಿನಂಗಡಿ, ಸುಳ್ಯ, ಹಾರಂಗಿ, ನಿಡಿಗೆ, ಮಾಣಿ, ತ್ಯಾಗರ್ತಿ, ಕಳಸ, ಅಜ್ಜಂಪುರ, ಹಾಸನದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ರಾತ್ರಿ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ.

 

 

error: Content is protected !!
Scroll to Top